Breaking News

ಮೈಸೂರು ರೆಸ್ಟೋ ಪಬ್‌ನಲ್ಲಿ ಸಿಲಿಂಡರ್ ಬ್ಲಾಸ್ಟ್, ಮೈ ಪೂರ್ತಿ ಸುಟ್ಟ ಗಾಯದಿಂದ ಆಸ್ಪತ್ರೆ ಸೇರಿದ ಸ್ಯಾಂಡಲ್‌ವುಡ್‌ ಹಿರೋ!

ಮೈಸೂರಿನ ದಟ್ಟಗಳ್ಳಿ ಸಮೀಪ ನಟ ಪ್ರೀತಂ ಪುಮೀತ್ ಮಾಲೀಕತ್ವದ ‘ಫಾಕ್ಸ್ ಡೆನ್’ ರೆಸ್ಟೋ ಪಬ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ನಟ ಪ್ರೀತಂ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿಚನ್ ಭಾಗದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ಕ್ಷಣಾರ್ಧದಲ್ಲಿ ಪಬ್‌ಗೆ ಬೆಂಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾಹಿನ್ (26) ಮತ್ತು ಪ್ರಕಾಶ್ (24) ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸಿಲಿಂಡರ್ ಸೋರಿಕೆಯೇ ಅವಘಡಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ದಟ್ಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *