ಉಡುಪಿಯ ಬನ್ನಂಜೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ 17 ವರ್ಷದ ಬಾಲಕಿಯನ್ನು ರಕ್ಷಿಸಲು ಮುಂದಾದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಮೇಲೆ ಚಾಕು ಹಿಡಿದು ದಾಳಿ ನಡೆಸಿದ ಘಟನೆ ಸೋಮವಾರ ನಡೆದಿದೆ. ವಿಶು ಶೆಟ್ಟಿ ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ. ಉತ್ತರ ಕನ್ನಡ ಮೂಲದ ಬಾಲಕಿ ಮನೆಯಿಂದ ಹೊರಟು ಉಡುಪಿಗೆ ಬಂದಿದ್ದಳು. ಮಾಹಿತಿ ಪಡೆದ ವಿಶು ಶೆಟ್ಟಿ, ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಇಲಾಖೆಯ ಸಿಬ್ಬಂದಿಯ ಸಹಾಯದಿಂದ ಬಾಲಕಿಯನ್ನು ಸುರಕ್ಷಿತವಾಗಿ ವಶಕ್ಕೆ ಪಡೆಯಲು ಯತ್ನಿಸಿದ ವೇಳೆ, ಆಕೆ ಬ್ಯಾಗಿನಿಂದ ಚಾಕು ತೆಗೆದು ದಾಳಿ ನಡೆಸಿದ್ದಾಳೆ ಎಂದು ತಿಳಿದುಬಂದಿದೆ. ಬಾಲಕಿಯ ತಾಯಿ ಘಟನೆ ವೇಳೆ ಮೂರ್ಚೆ ಬಿದ್ದಿದ್ದು, ತಾಯಿ ಮತ್ತು ಮಗಳನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಈ ಮನಸ್ಥಿತಿಗೆ ಪ್ರೇಮ ವೈಫಲ್ಯ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಇಲಾಖೆ ಮುಂದಿನ ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

