Breaking News

ರಹಸ್ಯ ಮದುವೆ: ಯುವತಿಯನ್ನು ಕೊಂದು ಆತ್ಮಹತ್ಯೆ ನಾಟಕವಾಡಿದ ಆಟೋ ಚಾಲಕ!

ಬೆಂಗಳೂರು: ರಹಸ್ಯವಾಗಿ ಮದುವೆಯಾಗಿದ್ದ ಪತ್ನಿಯ ನಿಶ್ಚಿತಾರ್ಥ ನಡೆಯಲಿದೆಯೆಂಬ ಮಾಹಿತಿ ತಿಳಿದ ಬಳಿಕ ಆಕೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಆಟೋ ಚಾಲಕನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮೃತೆಯನ್ನು ಭವಾನಿ ಎಸ್. (33) ಎಂದು ಗುರುತಿಸಲಾಗಿದ್ದು, ಖಾಸಗಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಚಂದ್ರಶೇಖರ್ ಮತ್ತು ಭವಾನಿ ಒಂದು ವರ್ಷದ ಹಿಂದೆ ಕುಟುಂಬದವರಿಗೆ ತಿಳಿಯದಂತೆ ಮದುವೆಯಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ಭವಾನಿಗೆ ಮತ್ತೊಂದು ಮದುವೆ ನಿಶ್ಚಯವಾಗುತ್ತಿದ್ದ ವಿಚಾರ ತಿಳಿದು ಕೋಪಗೊಂಡ ಚಂದ್ರಶೇಖರ್, ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದಂತೆ ನಾಟಕವಾಡಲು ಪ್ರಯತ್ನಿಸಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *