ಹಳಿಯಾಳ: ಮದ್ಯದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ರೌಡಿ ಶೀಟರ್ ಒಬ್ಬ, ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಆರೋಪಿ ಮಚ್ ಮಂಜ ಮೌರ್ಯ ಹೋಟೆಲ್ ಎದುರು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದು, ಸ್ಥಳೀಯರೊಂದಿಗೆ ಜಗಳವಾಡಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರ ಮಾತಿಗೂ ಕಿವಿಗೊಡದೆ ಉದ್ಧಟತನ ಪ್ರದರ್ಶಿಸಿದ್ದಾನೆ. ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾನೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

