Breaking News

ಕಟ್ಟಿ ಹಾಕಿ ಲೈಂಗಿಕ ಕಿರುಕುಳ: ಕೇಸು

ಕಾಸರಗೋಡು: ಯುವತಿಯನ್ನು ವಸತಿ ಗೃಹಕ್ಕೆ ಕರೆದೊಯ್ದು ಕಟ್ಟಿ ಹಾಕಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯುವಕನ ವಿರುದ್ಧ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಸಮೀಪದ ಪಂಚಾಯತ್‌ ವ್ಯಾಪ್ತಿಯ ಯುವತಿಯೊಬ್ಬಳು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಆರೋಪಿಯು ಆಕೆಯನ್ನು ವಸತಿ ಗೃಹಕ್ಕೆ ಕರೆದೊಯ್ದು ಅಲ್ಲಿ ಕಟ್ಟಿ ಹಾಕಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಬಳಿಕ ಯುವತಿ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾಳೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದು, ತನಿಖೆಯ ಹಿತದೃಷ್ಟಿಯಿಂದ ಆರೋಪಿಯ ಹೆಸರನ್ನು ಬಹಿರಂಗಪಡಿಸಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

Share News

About BigTv News

Check Also

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು!

ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ …

Leave a Reply

Your email address will not be published. Required fields are marked *