Breaking News

ಮಾಜಿ ಸೈನಿಕನ ಮರ್ಡರ್‌ಗೆ ಬಿಗ್‌ ಟ್ವಿಸ್ಟ್: ಪತ್ನಿ ಸುಮಾಳ ಅಸಲಿಯತ್ತು ಬಯಲು: FSL ವರದಿಯನ್ನೇ ತಿರುಚಿದ ದುಷ್ಕರ್ಮಿಗಳು

ಬೆಳಗಾವಿ ಜಿಲ್ಲೆಯಲ್ಲಿ ₹2 ಕೋಟಿ ವಿಮೆ ಹಣ ಪಡೆಯುವ ಉದ್ದೇಶದಿಂದ ಪತಿಯನ್ನು ಕೊಲೆ ಮಾಡಿರುವ ಭೀಕರ ಪ್ರಕರಣ ಬೆಳಕಿಗೆ ಬಂದಿದೆ. ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಸಂದೀಪ್ ಮಂಜರಗಿ (35) ಅವರನ್ನು ಪತ್ನಿ ಸುಮಾ ಹಾಗೂ ಆಕೆಯ ಪ್ರಿಯಕರ ಪುಂಡಲೀಕ ಡೊಂಗರ್ ಸೇರಿ ಆಸ್ಪತ್ರೆಯಲ್ಲೇ ವಿಷ ನೀಡಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ರಸ್ತೆ ಅಪಘಾತದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ಸಂದೀಪ್‌ಗೆ ಸಲೈನ್ ಮೂಲಕ ವಿಷ ನೀಡಲಾಗಿದ್ದು, ಸಾವನ್ನು ಹೃದಯಾಘಾತ ಎಂದು ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ತಿಗಣೆ ಔಷಧ ಹಾಗೂ ಇಲಿ ಪಾಷಾಣ ಮಿಶ್ರಿತ ವಿಷ ಬಳಕೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣದ ತನಿಖೆಯಲ್ಲಿ ಎಫ್‌ಎಸ್‌ಎಲ್ ವರದಿ ತಿರುಚಿ ಸಾಕ್ಷ್ಯ ಮುಚ್ಚಿಹಾಕಲು ಯತ್ನಿಸಿರುವುದು ಬಹಿರಂಗವಾಗಿದೆ. ಪತ್ನಿ, ಪ್ರಿಯಕರ ಹಾಗೂ ಎಫ್‌ಎಸ್‌ಎಲ್ ಸಿಬ್ಬಂದಿ ಸೇರಿ ಸುಮಾರು 80 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *