Breaking News

: ವಿಜಯಪುರದಲ್ಲಿ ಭೀಕರ ಅಪಘಾತ; ಟೈರ್​​ ಬ್ಲಾಸ್ಟ್​​ ಆಗಿ ಬಸ್​​ಗೆ ಗುದ್ದಿದ ಟಿಪ್ಪರ್​​, ಮೂವರು ಸಾವು

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಟಿಪ್ಪರ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್‌ನ ಟೈರ್ ಬ್ಲಾಸ್ಟ್ ಆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಅಪಘಾತದಲ್ಲಿ ಟಿಪ್ಪರ್ ಚಾಲಕ ಅಶೋಕ್ ಉಟಗಿ, ಅವರ ಪತ್ನಿ ರಾಧಾಬಾಯಿ ಹಾಗೂ ಬಸ್ ಚಾಲಕ ಹನುಮಂತ ಚಲವಾದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *