Breaking News

ಕೆಲಸಕ್ಕೆಂದು ಬಂದ ಯುವಕನಿಂದ ಯುವತಿ ಅಪಹರಣ; ಲವ್ ಜಿಹಾದ್ ಶಂಕೆ

ಹಿರೇಕೆರೂರ: ತಾಲೂಕಿನ ಮಡ್ಲೂರು ಗ್ರಾಮದಲ್ಲಿ ಮನೆ ಕೆಲಸಕ್ಕೆಂದು ಬಂದಿದ್ದ ಮುಸ್ಲಿಂ ಯುವಕನೊಬ್ಬ ಅದೇ ಮನೆಯ ಹಿಂದೂ ಯುವತಿಯೊಬ್ಬಳನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದು, ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಹಾವೇರಿ ತಾಲೂಕಿನ ಕಬ್ಬೂರ ಗ್ರಾಮದ ಮಲ್ಲಿಕರೇಹಾನ ಚಮನಸಾಬ ಹಮ್ಮಗಿ ಯುವತಿಯನ್ನು ಕರೆದುಕೊಂಡು ಯುವಕ ಎನ್ನಲಾಗಿದೆ. ಈ ಕುರಿತು ಯುವತಿಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಈತ ಮನೆ ಕೆಲಸಕ್ಕೆಂದು ಬಂದಿದ್ದ. ನನ್ನ ಸಹೋದರಿ ತಿಳವಳ್ಳಿಗೆ ಕೆಲಸಕ್ಕೆಂದು ಹೋದಾಗ ಆಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಆದ್ದರಿಂದ ಕೂಡಲೇ ಆಕೆಯನ್ನು ಪತ್ತೆ ಮಾಡಿಕೊಡಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾನೆ. ಈ ಕುರಿತು ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *