Breaking News

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ

ಸಿಂಧನೂರು ನಗರದ ಪಿಡಬ್ಲ್ಯೂಡಿ ಕ್ಯಾಂಪ್ ಪ್ರದೇಶದಲ್ಲಿ ಶಾಲೆಗೆ ತೆರಳುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 44 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಬು ತಂ. ಖಾದರಸಾಬ್ ಎಂಬಾತನಾಗಿದ್ದು, 8 ಮತ್ತು 9 ವರ್ಷದ ಬಾಲಕಿಯರನ್ನು ಬಲವಂತವಾಗಿ ಮನೆಯೊಂದರಲ್ಲಿ ಕೂಡಿ ಹಾಕಿ ಹಲವು ದಿನಗಳ ಕಾಲ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಾದ ತಕ್ಷಣ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *