Breaking News

ಬೆಂಗಳೂರಲ್ಲಿ ಡ್ರಗ್ಸ್ ಬೇಟೆ: 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ, ಉಗಾಂಡಾ ಮಹಿಳೆ ಸೇರಿ ಮೂವರ ಬಂಧನ

ಬೆಂಗಳೂರಿನಲ್ಲಿ ಪೊಲೀಸರು ಹಾಗೂ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ₹5.67 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಕೊಕೇನ್ ಜಪ್ತಿ ಮಾಡಿದ್ದಾರೆ. ಉಗಾಂಡಾ ಮೂಲದ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಹೆಬ್ಬಾಳದಲ್ಲಿ ₹2.20 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬಳಿ ₹2.77 ಕೋಟಿ ಮೌಲ್ಯದ ಗಾಂಜಾ ಪತ್ತೆಯಾಗಿದೆ. ಇನ್ನೊಂದು ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ₹70.50 ಲಕ್ಷ ಮೌಲ್ಯದ ಕೊಕೇನ್ ಜಪ್ತಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ. ಪ್ರಕರಣಗಳ ಕುರಿತು ತನಿಖೆ ಮುಂದುವರಿದಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *