ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕ ಶ್ರೀಶೈಲ ಕುಂಬಾರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಸೆಸೆಲ್ಸಿ ವಿದ್ಯಾರ್ಥಿನಿಯನ್ನು ಕನ್ನಡ ವಿಷಯದಲ್ಲಿ ಉತ್ತೀರ್ಣಗೊಳಿಸುವುದಾಗಿ ಆಮಿಷವೊಡ್ಡಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿನಿ ಶೌಚಾಲಯಕ್ಕೆ ತೆರಳಿದ್ದ ವೇಳೆ ಶಿಕ್ಷಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಯ ವಿಚಾರ ತಿಳಿದ ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಪೊಲೀಸರು ಶಿಕ್ಷಕನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

