ಶಿವಮೊಗ್ಗ: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಏಕವಚನದಲ್ಲಿ ನಿಂದಿಸಿದ ಆರೋಪದ ಮೇಲೆ ಎಂ.ಎನ್. ಗಣೇಶ್ ಎಂಬ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆರ್.ಎಸ್.ಎಸ್. ಕುರಿತಾಗಿ ಸಾರ್ವಜನಿಕವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೀಡಿದ ಹೇಳಿಕೆಯ ಸಂದರ್ಭದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿತ್ತು. ಈ ಕುರಿತಾಗಿ ಎಂ.ಎಸ್. ಗಣೇಶ್ ಎಂಬ ವ್ಯಕ್ತಿ ಅಶ್ಲೀಲವಾಗಿ ಕಿಮ್ಮನೆ ರತ್ನಾಕರ್ ಅವರನ್ನು ಏಕವಚನದಲ್ಲಿ ನಿಂದಿಸಿದ್ದು, ಸೂಕ್ತ ಕ್ರಮ ಕೈಗೊಂಡು ಬಂಧಿಸಬೇಕು ಎಂದು ಒತ್ತಾಯಿಸಿ ತಾಲೂಕು ಕಾಂಗ್ರೆಸ್ ಇಂಟೆಕ್ ಘಟಕದ ಅಧ್ಯಕ್ಷ ಪ್ರೇಮಚಂದ್ರ ಯಡೂರು ನೇತೃತ್ವದಲ್ಲಿ ದೂರು ನೀಡಲಾಗಿದೆ. ಈ ಸಂದರ್ಭದಲ್ಲಿ ತೀರ್ಥಹಳ್ಳಿ ತಾಲೂಕು ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಹೊಸ್ಕೇರಿ ರವಿಕುಮಾರ್, ನಗರ ಘಟಕದ ಅಧ್ಯಕ್ಷ ಶ್ರೇಯಸ್ ರಾವ್, ಜಯಕರ ಶೆಟ್ಟಿ, ಫಣಿರಾಜ್ ಕಟ್ಟೆಹಾಕ್ಕಲು, ಪ್ರಶಾಂತ್ ಸಾಲ್ಯಾನ್, ಸಂದೀಪ್, ಮಹೇಂದ್, ಇತರರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

