Breaking News

ರಸ್ತೆ ಅಪಘಾತದಲ್ಲಿ ಅರ್ಧದೇಹ ಸಿಕ್ಕಿದೆ, ಗುರುತು ಸಿಕ್ಕಿಲ್ಲ! ಪೊಲೀಸರಿಗೆ ತಲೆನೋವಾದ ಪ್ರಕರಣ!

ಬೆಂಗಳೂರು: ನೈಸ್‌ ರಸ್ತೆ ಅಪಘಾತದಲ್ಲಿ ಸಿಕ್ಕ ವ್ಯಕ್ತಿಯ ಅರ್ಧ ದೇಹ ಪೊಲೀಸರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಸಂಬಂಧ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣವನ್ನು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಜಾಲಾಡುತ್ತಿದ್ದಾರೆ. ಮೇ 4ರಂದು ನೈಸ್‌ ರಸ್ತೆಯಲ್ಲಿ ಅಪಘಾತವಾಗಿದೆ ಎಂದು ಸಾರ್ವಜನಿಕರಿಂದ ಕರೆ ಬಂದಿತ್ತು. ವಿಷಯ ತಿಳಿದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಅಪಘಾತದಲ್ಲಿ ಮೃತ ಪಟ್ಟ ವ್ಯಕ್ತಿಯೊಬ್ಬರ ಅಪ್ಪಚ್ಚಿಯಾಗಿದ್ದ ಅರ್ಧ ದೇಹ ಸಿಕ್ಕಿದೆ. ಆದರೆ ಮೃತರ ಗುರುತು ಪತ್ತೆಯಾಗಿಲ್ಲ. ಮೃತಪಟ್ಟವರು 35-40 ವರ್ಷದವರು ಎಂದು ಕಂಡು ಬಂದಿದೆ.ಅರ್ಧದೇಹದ ಗುರುತು ಪತ್ತೆಯಾಗಿಲ್ಲ. ಅಪಘಾತ ಸ್ಥಳದಲ್ಲಿ ಮೃತ ವ್ಯಕ್ತಿಗೆ ಸಂಬಂಧಿಸಿದ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಘಟನೆ ನಡೆದು ಒಂದೂವರೆ ತಿಂಗಳು ಕಳೆದಿದ್ದರೂ ಮೃತರ ಗುರುತು ಪತ್ತೆಯಾಗಿಲ್ಲ. ಅಪಘಾತ ಮಾಡಿದ ವಾಹನ ಯಾವುದು ಎಂಬುದು ಕೂಡ ಪತ್ತೆಯಾಗಿಲ್ಲ. ಹೀಗಾಗಿ ಈ ಅಪಘಾತ ಪ್ರಕರಣವನ್ನು ಬೇಧಿಸುವುದು ಪೊಲೀಸರಿಗೆ ದೊಡ್ಡ ಸವಾಲಿನ ಕೆಲಸವಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣಗಳ ಬೆನ್ನು ಬಿದ್ದಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *