ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಶಾಲೆಯೊಂದರ ಶಿಕ್ಷಕ ಶ್ರೀಶೈಲ ಕುಂಬಾರ ವಿರುದ್ಧ 10ನೇ ತರಗತಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಕನ್ನಡ ವಿಷಯದಲ್ಲಿ ಪಾಸ್ ಮಾಡುವುದಾಗಿ ಹೇಳಿ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕರೆದು ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಶಾಲೆಗೆ ಬಂದ ಪೋಷಕರು ಶಿಕ್ಷಕನನ್ನು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

