Breaking News

ಸಾರಿಗೆ ಬಸ್-ಟಂಟಂ ನಡುವೆ ಢಿಕ್ಕಿ: ನಾಲ್ವರಿಗೆ ಗಂಭೀರ ಗಾಯ

ಕಲಬುರಗಿ: ನಗರದ ಹೊರವಲಯದ ಫರತಾಬಾದ್ ಸಮೀಪದ ಕೂಡಿ ದರ್ಗಾ ಬಳಿ ಕೆಕೆಆರ್‌ಟಿಸಿ ಬಸ್ ಮತ್ತು ಟಂಟಂ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಜೇವರ್ಗಿಯಿಂದ ಕಲಬುರಗಿ ಕಡೆಗೆ ಬರುತ್ತಿದ್ದ ಕೆಕೆಆರ್‌ಟಿಸಿ ಬಸ್ ಹಾಗೂ ಕಲಬುರಗಿಯಿಂದ ಜೇವರ್ಗಿ ಕಡೆಗೆ ತೆರಳುತ್ತಿದ್ದ ಟಂಟಂ ಗೂಡ್ಸ್ ವಾಹನ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಟಂಟಂ ವಾಹನದಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಜೇವರ್ಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಲಬುರಗಿ ಟ್ರಾಫಿಕ್ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *