Breaking News

ಅಕ್ರಮ ಸಂಬಂಧದ ಅಮಲು: ‘ದೇವಿ ಪ್ರಸಾದ’ವೆಂದು ಪತ್ನಿಗೆ ಇಲಿ ಪಾಷಾಣ ಕುಡಿಸಿ ಕೊಂದ ಪಾಪಿ ಪತಿ!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರುಕುಂಬಿ ಗ್ರಾಮದ ಬಳಿ ಅಕ್ರಮ ಸಂಬಂಧದ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನೇ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಧಾರವಾಡ ತಾಲೂಕಿನ ಕಲ್ಲೂರು ಗ್ರಾಮದ ಸಕ್ಕುಬಾಯಿ ಹಾಗೂ ಸಂತೋಷ್ ಪಟಾಯತ್ ದಂಪತಿ 9 ವರ್ಷಗಳಿಂದ ದಾಂಪತ್ಯ ಜೀವನ ನಡೆಸುತ್ತಿದ್ದರು. ಕಳೆದ ನಾಲ್ಕು ವರ್ಷಗಳಿಂದ ಸಂತೋಷ್‌ಗೆ ವಿಧವೆ ಮಹಿಳೆಯೊಬ್ಬಳೊಂದಿಗೆ ಅಕ್ರಮ ಸಂಬಂಧ ಬೆಳೆದಿದ್ದು, ಪತ್ನಿಯನ್ನು ಕೊಲ್ಲಲು ಸಂಚು ರೂಪಿಸಿದ್ದಾನೆ. ದೇವಸ್ಥಾನಕ್ಕೆ ತೆರಳಿದ್ದ ವೇಳೆ ಸಂತೋಷ್ ತಂಪುಪಾನೀಯದಲ್ಲಿ ಇಲಿ ಮದ್ದು ಹಾಗೂ ಗಾಜಿನ ಚೂರುಗಳನ್ನು ಬೆರೆಸಿ, ಅದನ್ನು “ದೇವಿಯ ಪ್ರಸಾದ” ಎಂದು ಹೇಳಿ ಸಕ್ಕುಬಾಯಿಗೆ ಕುಡಿಸಿದ್ದಾನೆ. ವಿಷದ ಪರಿಣಾಮದಿಂದ ಆಕೆ ಅಸ್ವಸ್ಥಳಾದಾಗ ಕತ್ತು ಹಿಸುಕಿ ಹತ್ಯೆ ಮಾಡಿ, ಬಳಿಕ ಅದನ್ನು ರಸ್ತೆ ಅಪಘಾತದಂತೆ ಬಿಂಬಿಸಲು ಯತ್ನಿಸಿದ್ದಾನೆ. ಸ್ಥಳ ಪರಿಶೀಲನೆ ವೇಳೆ ಅನುಮಾನಗೊಂಡ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದಾಗ ಇದು ಕೊಲೆ ಎಂಬುದು ಬಹಿರಂಗವಾಗಿದೆ. ವಿಚಾರಣೆ ವೇಳೆ ಸಂತೋಷ್ ಅಪರಾಧ ಒಪ್ಪಿಕೊಂಡಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಪ್ರಕರಣದಲ್ಲಿ ಆತನ ಪ್ರೇಯಸಿಯ ಪಾತ್ರವಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *