Breaking News

ಪೊಲೀಸ್ ಇಲಾಖೆ ಯಡವಟ್ಟಿನಿಂದ ರೌಡಿಗಳಿಗೆ ರಿಲೀಫ್..?

ರೌಡಿಗಳಿಗೆ ರಿಲೀಫ್ ಕೊಟ್ಟವರು ಯಾರು..? ತಪ್ಪು ಮಾಹಿತಿ ನೀಡಿದ ಪೊಲೀಸರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಆಗ್ರಹ..!

ಪೊಲೀಸ್ ಇಲಾಖೆಯ ಯಡವಟ್ಟಿನಿಂದ ನೂರಾರು ರೌಡಿಗಳಿಗೆ ಮುಕ್ತಿ..!ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡಲು ಒತ್ತಾಯ..

ರೌಡಿಪಟ್ಟಿಯಿಂದ ರೌಡಿಗಳ ಬಿಡುಗಡೆಗೆ ಕಾರಣ ಯಾರು..? ಸುಳ್ಳು ಮಾಹಿತಿ ನೀಡಿದ ಪೊಲೀಸರ ವಿರುದ್ಧ ತನಿಖೆಗೆ ಸಾರ್ವಜನಿಕರ ಆಗ್ರಹ..!

ರೌಡಿಪಟ್ಟಿ ನಿರ್ವಹಣೆಯಲ್ಲಿ ನಡೆದಿರುವ ಗಂಭೀರ ಲೋಪಗಳು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ. ಸರಿಯಾದ ದಾಖಲೆಗಳು ಹಾಗೂ ನಿಖರ ಮಾಹಿತಿಯನ್ನು ನ್ಯಾಯಾಲಯ ಮತ್ತು ಸಂಬಂಧಿತ ಪ್ರಾಧಿಕಾರಗಳ ಮುಂದೆ ಸಲ್ಲಿಸದ ಹಿನ್ನೆಲೆ, ನೂರಾರು ನೋಟೋರಿಯಸ್ ರೌಡಿಗಳ ಹೆಸರುಗಳು ರೌಡಿಪಟ್ಟಿಯಿಂದ ಕೈಬಿಡಲ್ಪಟ್ಟಿರುವ ಮಾಹಿತಿ ಹೊರಬಿದ್ದಿದೆ…

2022ರಲ್ಲಿ ಹೈಕೋರ್ಟ್ ರೌಡಿಪಟ್ಟಿ ತೆರೆಯುವ ಮತ್ತು ಮುಚ್ಚುವ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದ್ದರೂ, ಕೆಲ ಪೊಲೀಸರು ಆ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಕೆಲ ಪ್ರಕರಣಗಳಲ್ಲಿ ತಪ್ಪು ಮಾಹಿತಿ ಹಾಗೂ ಅಪೂರ್ಣ ದಾಖಲೆಗಳನ್ನು ಸಲ್ಲಿಸಿರುವ ಕಾರಣ ರೌಡಿಶೀಟರ್‌ಗಳಿಗೆ ಅನುಕೂಲವಾಗಿದೆ ಎನ್ನಲಾಗುತ್ತಿದೆ…

ಇದರಿಂದ ಸಮಾಜಕ್ಕೆ ಅಪಾಯಕಾರಿಯಾಗಿರುವ ಕೆಲ ರೌಡಿಶೀಟರ್‌ಗಳು ರೌಡಿಪಟ್ಟಿಯಿಂದ ಹೊರಬಂದಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಪೊಲೀಸ್ ಇಲಾಖೆಯಲ್ಲಿನ ಕೆಲವರ ನಿರ್ಲಕ್ಷ್ಯ ಅಥವಾ ತಪ್ಪು ಮಾಹಿತಿಯಿಂದ ಈ ಬೆಳವಣಿಗೆ ನಡೆದಿದ್ದರೆ ಅದರ ಸಂಪೂರ್ಣ ತನಿಖೆ ನಡೆಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ…

ತಪ್ಪು ಮಾಹಿತಿ ನೀಡಿರುವ ಪೊಲೀಸರು ಹಾಗೂ ಸಂಬಂಧಿತ ಪೊಲೀಸ್ ಇನ್ಸ್ಪೆಕ್ಟರ್‌ಗಳನ್ನು ತಕ್ಷಣ ಸಸ್ಪೆಂಡ್ ಮಾಡಬೇಕು. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ರೌಡಿಶೀಟರ್‌ಗಳಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ… ತಪ್ಪು ಮಾಹಿತಿ ಕೊಟ್ಟ ಪೊಲೀಸರು ಯಾರು..? ರೌಡಿಗಳಿಗೆ ರಿಲೀಫ್ ಕೊಡಲು ಕಾರಣರಾದವರ ವಿರುದ್ಧ ಕ್ರಮ ಯಾವಾಗ..?

ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ. ಸಂಪೂರ್ಣ ತನಿಖೆ ನಡೆದರೆ ಈ ಪ್ರಕರಣದ ನಿಜವಾದ ಬಣ್ಣ ಬಯಲಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *