ಬೆಳಗಾವಿ: ಮೊಬೈಲ್ ನೀಡಲು ನಿರಾಕರಿಸಿದ್ದ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಮಹಿಳೆಗೆ ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ. 2023ರ ಏಪ್ರಿಲ್ 30ರಂದು ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ, ಮದ್ಯದ ಅಮಲಿನಲ್ಲಿದ್ದ ಜಯಶ್ರೀ ಪವನ ಪವಾರ ಮೊಬೈಲ್ ಕೇಳಿದ್ದಕ್ಕೆ ನಾಗರಾಜ ಭೀಮಶಿ ರಾಗಿಪಾಟೀಲ ಮರುಪ್ರಶ್ನೆ ಮಾಡಿದ್ದರು. ಇದರಿಂದ ಉಂಟಾದ ಜಗಳದ ವೇಳೆ ಆರೋಪಿ ಚಾಕುವಿನಿಂದ ಎದೆಗೆ ಇರಿದ ಪರಿಣಾಮ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಮಾರ್ಕೆಟ್ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, ಮೃತನ ವಾರಸುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

