ಯಾದಗಿರಿ: ಜಿಲ್ಲೆಯ ಕೆಂಭಾವಿ ಸಮೀಪದ ಆಲ್ಹಾಳ ಗ್ರಾಮದ ಬಳಿ ಕೆಕೆಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಬಸ್ಸಿನಲ್ಲಿ 40 ರಿಂದ 50 ಮಂದಿ ಪ್ರಯಾಣಿಕರಿದ್ದು, ಶಾಲಾ ವಿದ್ಯಾರ್ಥಿಗಳೂ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಅಪಘಾತದ ಬಳಿಕ ಸ್ಥಳೀಯರು ಧಾವಿಸಿ ಕಿಟಕಿ ಹಾಗೂ ಬಾಗಿಲುಗಳ ಮೂಲಕ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದರು. ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದು, ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದನೆಂಬ ಅನುಮಾನವೂ ವ್ಯಕ್ತವಾಗಿದೆ. ಕೆಂಭಾವಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

