ಹೊಸಪೇಟೆ: ಎಪಿಎಂಸಿ ಮಾರುಕಟ್ಟೆ ಸಮೀಪದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆಯನ್ನು ಬಯಲುಗೊಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಒಡನಾಡಿ ಸಂಸ್ಥೆಗೆ ಬಂದ ದೂರಿನ ಮೇರೆಗೆ ಎಸ್‌ಪಿ ಎಸ್. ಜಾಹ್ನವಿ ಸೂಚನೆಯಂತೆ ಎಎಸ್‌ಪಿ ಜಿ. ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ನಾಲ್ವರು ಗ್ರಾಹಕರನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತ ಬಾಲಕರನ್ನು ಬಳಸಿಕೊಂಡಿರುವ ಆರೋಪವೂ ಕೇಳಿಬಂದಿದ್ದು, ಲಾಡ್ಜ್ ಅನ್ನು ಶಾಶ್ವತವಾಗಿ ಮುಚ್ಚುವಂತೆ ಒಡನಾಡಿ ಸಂಸ್ಥೆ ಒತ್ತಾಯಿಸಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

