ಮಂಗಳೂರು ಪೊಲೀಸ್ ಕಮಿಶನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಮಾದಕವಸ್ತು ಸೇವನೆ ಮಾಡಿದ ಆರೋಪದಡಿ ಐವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬರ್ಕೆ, ಕೊಣಾಜೆ, ಬಂದರು, ಉಳ್ಳಾಲ ಹಾಗೂ ಸುರತ್ಕಲ್ ಠಾಣೆಗಳ ಪೊಲೀಸರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದವರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಎಲ್ಲರೂ ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ. ಬಂಧಿತರ ವಿರುದ್ಧ ಸಂಬಂಧಿತ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

