Breaking News

ಯುವಕನ ಕಿರುಕುಳಕ್ಕೆ ಬೇಸತ್ತು 16 ವರ್ಷದ ಅಪ್ರಾಪ್ತೆ ಆತ್ಮಹತ್ಯೆ.!

ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಗ್ರಾಮದಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಜೀವಿತಾ ಮೃತಪಟ್ಟಿರುವ ಘಟನೆ ನಡೆದಿದೆ. ಯುವಕನೊಬ್ಬನ ನಿರಂತರ ಕಿರುಕುಳದಿಂದ ಮನನೊಂದಿದ್ದ ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಅದೇ ಗ್ರಾಮದ ಶಫಿ ಎಂಬ ಯುವಕ ಬಾಲಕಿಯ ಹಿಂದೆ ಬಿದ್ದು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಹಾಗೂ ಕುಟುಂಬದವರಿಗೂ ಬೆದರಿಕೆ ಹಾಕಿದ್ದ ಎಂದು ಮೃತಳ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಈ ಕಿರುಕುಳದಿಂದ ಬಾಲಕಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು ಎನ್ನಲಾಗಿದೆ. ಪೋಷಕರ ದೂರಿನ ಮೇರೆಗೆ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಖಂಡನೆ ವ್ಯಕ್ತಪಡಿಸಿದ ಕೆಲ ಸಂಘಟನೆಗಳ ಕಾರ್ಯಕರ್ತರು ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *