ಯುವತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನನ್ನು ತಡೆದು ಹಲ್ಲೆ ನಡೆಸಿದ ಆರೋಪದಡಿ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆ ಸಂಘಪರಿವಾರದ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಠಾಣೆ ಎದುರು ಧರಣಿ ನಡೆಸಿ, ಪ್ರಕರಣ ಹಿಂಪಡೆಯುವಂತೆ ಆಗ್ರಹಿಸಿದರು. ಎರಡೂ ಕಡೆಯವರ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿರುವ ಪೊಲೀಸರು, ತನಿಖೆಯ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

