ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಆನೆಬೈಲ್‌ನಲ್ಲಿ ಅಕ್ರಮವಾಗಿ ಲಾರಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆ ಲಾರಿಯಲ್ಲಿದ್ದ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಪೊಲೀಸರು ಲಾರಿಯನ್ನು ತಪಾಸಣೆ ನಡೆಸಿದಾಗ 16 ಜಾನುವಾರುಗಳನ್ನು ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಜಾನುವಾರುಗಳು ಹಾಗೂ ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಹಾಸನ ಸಂತೆಯಿಂದ ಖರೀದಿಸಿದ ಜಾನುವಾರುಗಳನ್ನು ಕೇರಳದ ಪಾಲಕ್ಕಾಡ್‌ಗೆ ಸಾಗಿಸಲಾಗುತ್ತಿತ್ತು ಎಂದು ವಿಚಾರಣೆ ವೇಳೆ ಆರೋಪಿಗಳು ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

