Breaking News

ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ: 2 ಮಹಿಳೆಯರು ಸೇರಿ 6 ಮಂದಿ ಬಂಧನ

ಬೆಂಗಳೂರು: ಬಾಡಿಗೆ ಮನೆ ಹಾಗೂ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪುರುಷರು, ನಾಲ್ವರು ಮಹಿಳೆಯರು ಸೇರಿ ಆರು ಮಂದಿಯನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು, ಕಾಮಾಕ್ಷಿಪಾಳ್ಯ, ಕೆ.ಆರ್‌ಪುರ, ಕುಮಾರಸ್ವಾಮಿ ಲೇಔಟ್‌, ಹೆಣ್ಣೂರು ಪೊಲೀಸ್‌ ಠಾಣಾ ವ್ಯಾಪಿಗಳಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು ಹಾಗೂ ವರ್ತೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಸ್ಪಾವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಸಿಕ್ಕಿತ್ತು.ಈ ಖಚಿತ ಮಾಹಿತಿ ಮೇರೆಗೆ ಆ ಸ್ಥಳಗಳ ಮೇಲೆ ದಾಳಿ ಮಾಡಿ ಆರೋಪಿಗಳ ಬಂಧಿಸಲಾಗಿದೆ. ಈ ವೇಳೆ ಹೊರ ರಾಜ್ಯದ ನಾಲ್ವರು ಮಹಿಳೆಯರು ಹಾಗೂ ಸ್ಥಳೀಯ ಮೂವರು ಸೇರಿದಂತೆ ಏಳು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಈ ಸಂಬಂಧ ಸ್ಥಳೀಯ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *