Breaking News

ಕಲಬುರಗಿ: ಬಾಲಕಿ ಮೇಲೆ ಅತ್ಯಾಚಾರ; ಮಲತಂದೆಗೆ 20 ವರ್ಷ ಜೈಲು

13 ವರ್ಷದ ಬಾಲಕಿ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಮಲತಂದೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕಲಬುರಗಿ ವಿಶೇಷ ಪೋಕ್ಸೊ ನ್ಯಾಯಾಲಯ ತೀರ್ಪು ನೀಡಿದೆ. ಜೊತೆಗೆ ₹25 ಸಾವಿರ ದಂಡ ಹಾಗೂ ಬಾಲಕಿಗೆ ₹5 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದೆ. 2025ರ ಜೂನ್ 14ರಂದು ನಡೆದ ಘಟನೆ ಸಂಬಂಧ ತಾಯಿ ನೀಡಿದ ದೂರಿನ ಮೇರೆಗೆ ಸಬರ್ಬನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ವಿಚಾರಣೆ ವೇಳೆ ಆರೋಪಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಬೀತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ದೋಷಿ ಎಂದು ಘೋಷಿಸಿ ಶಿಕ್ಷೆ ವಿಧಿಸಿದ್ದು, ನೊಂದ ಬಾಲಕಿಯ ಪುನರ್ವಸತಿಗಾಗಿ ಪರಿಹಾರ ನೀಡುವಂತೆ ನಿರ್ದೇಶನ ನೀಡಿದೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *