ಮಿರ್ಜಾಪುರದಲ್ಲಿ ಪೊಲೀಸ್ ಸಮವಸ್ತ್ರ ಧರಿಸಿ ಸಬ್‌ಇನ್ಸ್‌ಪೆಕ್ಟರ್ ಎಂದು ಸೋಗು ಹಾಕುತ್ತಿದ್ದ 21 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಯಾಗ್‌ರಾಜ್ ಮೂಲದ ಶಿವಲಾಲ್ ಪಾಲ್ ಕಲೆಕ್ಟರೇಟ್ ಆವರಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವೇಳೆ ಸಾರ್ವಜನಿಕರು ಪ್ರಶ್ನಿಸಿದಾಗ ತಡಬಡಾಯಿಸಿದ್ದಾನೆ. ಮಾಹಿತಿ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಯಾವುದೇ ಅಧಿಕೃತ ದಾಖಲೆಗಳಿಲ್ಲದೇ ನಕಲಿ ಪೊಲೀಸ್ ಆಗಿ ಸುತ್ತಾಡುತ್ತಿದ್ದದ್ದು ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

