Breaking News

ದಾವಣಗೆರೆಯಲ್ಲಿ 40 ನಕಲಿ ವೈದ್ಯರ ಪತ್ತೆ: ಇಂಜೆಕ್ಷನ್, ಸ್ಟೀರಾಯ್ಡ್ ನೀಡಿದರೆ 3 ವರ್ಷ ಜೈಲು ಶಿಕ್ಷೆ ಖಚಿತ!

ದಾವಣಗೆರೆ ಜಿಲ್ಲೆಯಲ್ಲಿ ತಲೆ ಎತ್ತಿರುವ ನಕಲಿ ಕ್ಲಿನಿಕ್‌ಗಳು ಮತ್ತು ನಕಲಿ ವೈದ್ಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಗುಪ್ತಚರ ಇಲಾಖೆಯ ವರದಿ ಹಾಗೂ ಸಾರ್ವಜನಿಕರ ದೂರುಗಳ ಆಧಾರದ ಮೇಲೆ ಜಿಲ್ಲೆಯಲ್ಲಿ ಈಗಾಗಲೇ 40 ನಕಲಿ ವೈದ್ಯರ ಪ್ರಕರಣಗಳು ದಾಖಲಾಗಿವೆ. ತಾಲೂಕು ವೈದ್ಯಾಧಿಕಾರಿಗಳ ತಂಡ ಹಲವು ಕಡೆ ದಾಳಿ ನಡೆಸಿ ಪರಿಶೀಲನೆ ಮುಂದುವರಿಸಿದೆ. ಕೆಪಿಎಂಇ ಕಾಯ್ದೆಯ ಪ್ರಕಾರ ಮಾನ್ಯ ವೈದ್ಯಕೀಯ ಪದವಿ ಹಾಗೂ ನೋಂದಣಿ ಇಲ್ಲದೆ ವೈದ್ಯಕೀಯ ಸೇವೆ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿತಸ್ಥರಿಗೆ ₹25 ಸಾವಿರದಿಂದ ₹1 ಲಕ್ಷದವರೆಗೆ ದಂಡ ಹಾಗೂ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *