Breaking News

ಅತ್ಯಾಚಾರಕ್ಕೊಳಗಾದ 9ನೇ ತರಗತಿ ಬಾಲಕಿ 3 ತಿಂಗಳ ಗರ್ಭಿಣಿ: ಪೋಕ್ಸೋ ಕೇಸ್ ದಾಖಲು

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರಕ್ಕೊಳಗಾದ 14 ವರ್ಷದ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ.ಮೊರಾರ್ಜಿ ವಸತಿ ಶಾಲೆಯ 9ನೇ ತರಗತಿಯ 14 ವರ್ಷದ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ಶಿಟ್ಲಘಟ್ಟ ತಾಲೂಕಿನ ಗಾಂಡ್ಲಚಿಂತೆ ಗ್ರಾಮದ ಬಾಲಕಿ ಗಡಿಗವಾರಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಾಳೆ. ಗಾಡ್ಲಚಿಂತೆ ಗ್ರಾಮದ 23 ವರ್ಷದ ಚಂದ್ರು ಬಾಲಕಿ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಪೋಷಕರು ಕುರಿ ಮೇಯಿಸಲು ಹೋದಾಗ ಮನೆಗೆ ನುಗ್ಗಿದ ಚಂದ್ರು ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದ ಎಂದು ಹೇಳಲಾಗಿದೆ. ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *