ಮಂಡ್ಯ ಜಿಲ್ಲೆಯ ಕೆಸ್ತೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು ₹60 ಲಕ್ಷ ಮೌಲ್ಯದ 111 ಕೆಜಿ ಗಾಂಜಾವನ್ನು ಜಪ್ತಿ ಮಾಡಿ ಆಂಧ್ರಪ್ರದೇಶ ಮೂಲದ ಶ್ರೀನಿವಾಸಲು ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ತುಮಕೂರು-ಮದ್ದೂರು ರಾಜ್ಯ ಹೆದ್ದಾರಿಯಲ್ಲಿ ಕಾರು ತಡೆದು ಪರಿಶೀಲಿಸಿದ ವೇಳೆ ಡಿಕ್ಕಿಯಲ್ಲಿದ್ದ 21 ಪ್ಲಾಸ್ಟಿಕ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಪತ್ತೆಯಾಗಿದೆ. ಗಾಂಜಾವನ್ನು ಒಡಿಶಾದಿಂದ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಕೆಲವರ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಕಾರಿನ ಮಾಲೀಕತ್ವ ಸೇರಿದಂತೆ ಇತರೆ ವಿವರಗಳ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಶೋಭಾರಾಣಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

