Breaking News

ಪೊಲೀಸ್ ಜೀಪ್‌ ನಲ್ಲೇ ಬಂದು ಉದ್ಯಮಿಗಳಿಂದ 20 ಲಕ್ಷ ರೂ. ದೋಚಿದ ಇನ್ಸ್‌ ಪೆಕ್ಟರ್.!

ಬೆಂಗಳೂರು ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಗಳನ್ನು ಬೆದರಿಸಿ ₹20 ಲಕ್ಷ ದೋಚಿದ ಪ್ರಕರಣದಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಮುಖ್ಯ ಆರೋಪಿಯಾಗಿರುವುದು ಬೆಳಕಿಗೆ ಬಂದಿದೆ. ಕೇರಳ ಮೂಲದ ಉದ್ಯಮಿಗಳು ಹೋಟೆಲ್‌ನಲ್ಲಿ ತಂಗಿದ್ದ ವೇಳೆ, ಆರೋಪಿಗಳು ತಾವು ಕ್ರೈಂ ವಿಭಾಗದ ಪೊಲೀಸರು ಎಂದು ಹೇಳಿಕೊಂಡು ನಕಲಿ ಗುರುತಿನ ಚೀಟಿ ತೋರಿಸಿ ಹಣ ಕಸಿದುಕೊಂಡಿದ್ದಾರೆ. ದರೋಡೆಗೆ ಇಲಾಖೆಯ ಅಧಿಕೃತ ಸಿಐಡಿ ಜೀಪನ್ನೇ ಬಳಸಲಾಗಿದ್ದು, ಸಿಸಿಟಿವಿ ಪರಿಶೀಲನೆಯ ವೇಳೆ ಈ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಪ್ರಕರಣ ಸಂಬಂಧ ಕುಪೇಂದ್ರ ಎಂಬಾತನನ್ನು ಬಂಧಿಸಿದಾಗ, ಇಡೀ ಕೃತ್ಯದ ಮಾಸ್ಟರ್‌ಮೈಂಡ್ ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಎಂಬುದು ವಿಚಾರಣೆಯಲ್ಲಿ ಬಹಿರಂಗವಾಗಿದೆ. ಪ್ರಕರಣ ಬೆಳಕಿಗೆ ಬಂದ ತಕ್ಷಣ ಮಹೇಶ್ ಕನಕಗಿರಿ ಸೇರಿದಂತೆ ಉಳಿದ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಸಿಐಡಿ ಜೀಪನ್ನು ವಶಕ್ಕೆ ಪಡೆದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *