ಚಿಕ್ಕಮಗಳೂರು: ನಡುರಸ್ತೆಯಲ್ಲಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಯುವಕನ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮಹಮದ್ ಸಮೀರ್ ಎಂಬಾತ ಗೆಳೆಯರೊಂದಿಗೆ ಸೇರಿ ಮಧ್ಯರಾತ್ರಿ ತಲ್ವಾರ್ ಪ್ರದರ್ಶಿಸಿ ಕೇಕ್ ಕತ್ತರಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ಆಧರಿಸಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಪುಂಡಾಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

