Breaking News

ಮಲ್ಪೆ: ಗಾಂಜಾ ವ್ಯವಹಾರ ಮಾಡುತ್ತಿದ್ದ ಮಹಿಳೆ ಸೇರಿ 7 ಮಂದಿ ಬಂಧನ

ಉಡುಪಿ ಜಿಲ್ಲೆಯ ತೆಂಕನಿಡಿಯೂರು ಗ್ರಾಮದ ಹೋಂ ಸ್ಟೇ ಮೇಲೆ ದಾಳಿ ನಡೆಸಿದ ಮಲ್ಪೆ ಪೊಲೀಸರು ಮಹಿಳೆ ಸೇರಿದಂತೆ 7 ಮಂದಿಯನ್ನು ಬಂಧಿಸಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ದಾಳಿಯ ವೇಳೆ 33.81 ಗ್ರಾಂ ಗಾಂಜಾ ಹಾಗೂ 9.73 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, 5 ಮೊಬೈಲ್ ಫೋನ್‌ಗಳನ್ನೂ ವಶಪಡಿಸಿಕೊಳ್ಳಲಾಗಿದೆ. ನಾಲ್ವರು ಆರೋಪಿಗಳು ಮಾದಕ ವಸ್ತು ಸೇವನೆ ಮಾಡಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅನಧಿಕೃತವಾಗಿ ಹೋಂ ಸ್ಟೇ ನಡೆಸಿ ಮಾದಕ ವಸ್ತು ಸೇವನೆಗೆ ಅವಕಾಶ ಕಲ್ಪಿಸಿದ ಆರೋಪದಡಿ ಮಾಲಕ ಧನ್ವತ್ ರಿಕೀತ್, ಕೆಲಸಗಾರ ಬಸವರಾಜು ಹಾಗೂ ಇತರ ಆರೋಪಿಗಳನ್ನು ಬಂಧಿಸಿ ಮುಂದಿನ ತನಿಖೆ ನಡೆಸಲಾಗುತ್ತಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *