Breaking News

ಹಿಂದೂ ಯುವತಿ ಅಪಹರಣ ಕೇಸ್​​ಗೆ ಟ್ವಿಸ್ಟ್: ಮುಸ್ಲಿಂ ಯುವಕನ ವಿರುದ್ಧ ಕೇಸ್ ಬುಕ್, ಆಗಿದ್ದೇನು?

ಭಟ್ಕಳ: ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪದಡಿ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಶಾಹೀದ್ ಎಂಬಾತನನ್ನು ಬಂಧಿಸಿದ್ದಾರೆ. ಸೂಪರ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ವೇಳೆ ಹಿಂದೂ ಕಾರ್ಯಕರ್ತರು ಇಬ್ಬರನ್ನೂ ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಯುವಕ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ದೂರು ನೀಡಿದ್ದರಿಂದ ಕೆಲ ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ನಂತರ ಯುವತಿ ನೀಡಿದ ದೂರಿನ ಮೇರೆಗೆ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿ ಶಾಹೀದ್‌ನನ್ನು ಬಂಧಿಸಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *