Breaking News

ಬೆಂಗಳೂರಿನಲ್ಲಿ ರಿಹ್ಯಾಬ್ ಸೆಂಟರ್ ಮಾಲೀಕನ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ರಿಹ್ಯಾಬ್ ಸೆಂಟರ್ ಮಾಲೀಕನನ್ನು ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಶಿವಲಿಂಗಯ್ಯ (60) ಕೊಲೆಯಾದ ದುರ್ದೈವಿ. ರಿಹ್ಯಾಬ್ ಸೆಂಟರ್ ಗೆ ಚಿಕಿತ್ಸೆಗೆಂದು ಬಂದವರಿಂದಲೇ ಮಾಲೀಕನ ಹತ್ಯೆಯಾಗಿದೆ.ರಾಡ್ ನಿಂದ ಹೊಡೆದು ಹತ್ಯೆಗೈದಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಚಂದ್ರಾ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *