Breaking News

ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್; ಶೋಧದ ಬಳಿಕ ಹುಸಿ ಕರೆ ಎಂದು ಸ್ಪಷ್ಟನೆ

ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸಿಬ್ಬಂದಿ ತುರ್ತು ತಪಾಸಣೆ ನಡೆಸಿದರು. ನ್ಯಾಯಾಲಯದ ಎಲ್ಲಾ ಕೊಠಡಿಗಳು, ಸಭಾಂಗಣಗಳು ಮತ್ತು ವಕೀಲರ ಭವನದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರೂ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಲಿಲ್ಲ. ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ಅಧಿಕಾರಿಗಳು ದೃಢಪಡಿಸಿದರು. ಪದೆಪದೆ ನ್ಯಾಯಾಲಯಗಳಿಗೆ ಇಂತಹ ಬೆದರಿಕೆ ಇ-ಮೇಲ್‌ಗಳು ಬರುತ್ತಿರುವುದರಿಂದ ಆತಂಕ ಹೆಚ್ಚಾಗಿದ್ದು, ಇ-ಮೇಲ್ ಕಳುಹಿಸಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *