ಬೆಂಗಳೂರು ನಗರದ ಕಬ್ಬನ್ಪೇಟೆ ಪ್ರದೇಶದಲ್ಲಿ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಕಳ್ಳನೊಬ್ಬ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಜುನೈದ್ ಎಂದು ಗುರುತಿಸಲಾಗಿದೆ. ಮೊಬೈಲ್ ಕಸಿದು ಓಡುತ್ತಿದ್ದ ಜುನೈದ್ನನ್ನು ಸ್ಥಳೀಯರು ಬೆನ್ನಟ್ಟಿದ ವೇಳೆ ಆತ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರೂ ಅಷ್ಟರಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಅತಿಯಾದ ಓಟ ಹಾಗೂ ಆತಂಕದಿಂದ ಹೃದಯಾಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ. ಈ ಸಂಬಂಧ ಕಬ್ಬನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

