Breaking News

ದೊಡ್ಡಬಳ್ಳಾಪುರದಲ್ಲಿ ಖಾಕಿ ಬೇಟೆ.. ₹30 ಲಕ್ಷ ಮೌಲ್ಯದ ಶ್ರೀಗಂಧ ಜಪ್ತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಶ್ರೀಗಂಧ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಅಂತರಜಿಲ್ಲಾ ಕಳ್ಳರನ್ನು ಬಂಧಿಸಿದ್ದಾರೆ. ಮೈಸೂರು ಮೂಲದ ವೆಂಕಟೇಶ್ (26) ಹಾಗೂ ತುಮಕೂರು ಮೂಲದ ಅರುಣ್ (34) ಬಂಧಿತ ಆರೋಪಿಗಳು. ಇವರು ಕುರುಬರಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಸ್ಮಶಾನ ಹಾಗೂ ಸರ್ಕಾರಿ ಶಾಲೆಗಳ ಆವರಣದಲ್ಲಿದ್ದ ಗಂಧದ ಮರಗಳನ್ನು ಕಳವು ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳಿಂದ ₹30 ಲಕ್ಷಕ್ಕೂ ಅಧಿಕ ಮೌಲ್ಯದ 254 ಕೆ.ಜಿ. ಶ್ರೀಗಂಧ, ಪೆಟ್ರೋಲ್ ಚಾಲಿತ ಗರಗಸ ಹಾಗೂ ಕಳ್ಳತನಕ್ಕೆ ಬಳಸಿದ್ದ ಸ್ಯಾಂಟ್ರೋ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *