Breaking News

ಅನ್ಯಕೋಮಿನ ಹುಡುಗಿಯೊಂದಿಗೆ ಊಟಕ್ಕೆ ಹೋದಾತನಿಗೆ ಥಳಿಸಿ ನೈತಿಕ ಪೊಲೀಸ್‌ಗಿರಿ

ಹುಬ್ಬಳ್ಳಿ ಸಮೀಪದ ಅಂಚಟಗೇರಿ ಬಳಿ ಅನ್ಯಕೋಮಿನ ಯುವ ಜೋಡಿಯೊಂದು ಹೋಟೆಲ್‌ಗೆ ತೆರಳಿದ್ದ ವೇಳೆ 8-10 ಜನರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಹುಬ್ಬಳ್ಳಿಯ ಬಾಸೆಲ್ ಮಿಷನ್ ಕಾಂಪೌಂಡ್ ನಿವಾಸಿ ಶರವೀನ ಜೋಗುಳ ಎಂದು ಗುರುತಿಸಲಾಗಿದೆ. ಶರವೀನ ಅವರು ಧಾರವಾಡ ಮೂಲದ ಯುವತಿಯನ್ನು ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು, ಶುಕ್ರವಾರ ಇಬ್ಬರೂ ಅಂಚಟಗೇರಿ ಬಳಿಯ ರಾಸ್ತಾ-63 ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಮಹಿಳೆ ಸೇರಿ 8-10 ಜನರ ಗುಂಪು ಸ್ಥಳಕ್ಕೆ ಬಂದು ಯುವಕನನ್ನು ಕರೆದುಕೊಂಡು ಹೋಗಿ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ನಂತರ ಸಿದ್ಧಾರೂಢ ಮಠದ ಸಮೀಪದ ಶೆಡ್‌ನಲ್ಲಿ ಕೂಡಿ ಹಾಕಿ ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಶರವೀನ ಅವರು ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳು ಜೀವ ಬೆದರಿಕೆ ಹಾಕಿ ₹5 ಲಕ್ಷ ನೀಡುವಂತೆ ಯುವಕನ ತಾಯಿಗೆ ಒತ್ತಡ ಹೇರಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *