Breaking News

ಶಿವಮೊಗ್ಗ: ಯುವಕನ ಭೀಕರ ಹತ್ಯೆ

ಶಿವಮೊಗ್ಗ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಪ್ರವೀಣ್ (29) ಕೊಲೆಯಾದ ಯುವಕನಾಗಿದ್ದು, ಟ್ರಾಕ್ಟರ್ ಬಾಡಿಗೆ ಹಾಗೂ ಇತರೆ ಕೆಲಸಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ. ಶುಕ್ರವಾರ ಬೆಳಿಗ್ಗೆ ಕೆಲಸಕ್ಕೆ ಬರುವಂತೆ ಸಹೋದ್ಯೋಗಿಗಳಿಗೆ ತಿಳಿಸಿದ್ದ ಪ್ರವೀಣ್, ಬಳಿಕ ಅವರ ಕರೆಗಳನ್ನು ಸ್ವೀಕರಿಸಿರಲಿಲ್ಲ. ಅನುಮಾನಗೊಂಡ ಯುವಕರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಪ್ರವೀಣ್ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಪ್ರವೀಣ್ ಅವರನ್ನು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಹಳೆ ವೈಷಮ್ಯದ ಹಿನ್ನೆಲೆ ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *