ಚಿಕ್ಕಮಗಳೂರು : ಕಾಫಿನಾಡಲ್ಲಿ ಲಾಂಗು-ಮಚ್ಚುಗಳ ಹಾವಳಿ ಮುಂದುವರಿದಿದ್ದು, ಕ್ಷುಲ್ಲಕ ವಿಚಾರಕ್ಕೂ ಮಾರಕಾಸ್ತ್ರಗಳು ಕೈಗೆತ್ತಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಿವೆ.ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದಲ್ಲಿ ಅಕ್ರಮ ಕಟ್ಟಡದ ಬಗ್ಗೆ ಪ್ರಶ್ನೆ ಮಾಡಿದ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಅದು ಬಳಿಕ ಗಲಾಟೆಗೆ ತಿರುಗಿದೆ ಎನ್ನಲಾಗಿದೆ.ಈ ವೇಳೆ ಉದಯ್ ಎಂಬಾತ ತಾರೇಶ್ ಮೇಲೆ ಮಚ್ಚು ಬೀಸಿರುವ ಆರೋಪ ಕೇಳಿಬಂದಿದೆ. ಆರೋಪಿ ಉದಯ್ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಘಟನೆ ವೇಳೆ ಸ್ಥಳೀಯರು ಮಧ್ಯಪ್ರವೇಶಿಸಿ ಇಬ್ಬರ ಜಗಳವನ್ನು ಬಿಡಿಸಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

