Breaking News

ಹಣಕ್ಕಾಗಿ ಪ್ರಿಯಕರ ಜತೆ ಸೇರಿ ಪತಿಯನ್ನೇ ಕೊಂದ ಮಗಳು, ನೊಂದು ತಾಯಿ ಆತ್ಮಹತ್ಯೆಗೆ ಶರಣು

ಬೆಳಗಾವಿ: 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಮಾಜಿ ಸೈನಿಕನಾಗಿದ್ದ ಪತಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಇದೀಗ ಆಘಾತಕಾರಿ ಘಟನೆಯೊಂದು ನಡೆದಿದೆ. ಮಗಳು ಹಣಕ್ಕಾಗಿ ತನ್ನ ಗಂಡನನ್ನೇ ಕೊಂದಿದ್ದಕ್ಕೆ ಜರ್ಜರಿತರಾಗಿದ್ದ ತಾಯಿ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ಸುಮಾ ಮಂಜರಗಿ ತಾಯಿ ಮಹಾದೇವಿ ಬದಾಮಿ (57) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳು ಸುಮಾ ಮತ್ತು ಆಕೆಯ ಪ್ರಿಯಕರ ಸೇರಿ ಅಳಿಯನನ್ನು ಭೀಕರವಾಗಿ ಕೊಂದ ವಿಷಯ ತಿಳಿದು ತಾಯಿ ತೀವ್ರ ದುಃಖ ವ್ಯಕ್ತಪಡಿಸಿದ್ದರು. ಜೂನ್ 14ರಂದು ಮಗಳನ್ನು ಯಮಕನಮರಡಿ ಪೊಲೀಸರು ಬಂಧಿಸುತ್ತಿದ್ದಂತೆ ತಾಯಿ ಮಾನಸಿಕವಾಗಿ ಸಂಪೂರ್ಣ ಜರ್ಜರಿತರಾಗಿದ್ದರು ಎನ್ನಲಾಗಿದೆ. ಇನ್ನೂ ತನ್ನ ಮಗಳು ಮಾಡಿದ ಕೃತ್ಯದಿಂದ ನೊಂದಿದ್ದ ತಾಯಿ ಮಹಾದೇವಿ ಅವರು ಇಂದು ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿರುವ ತಮ್ಮ ಮನೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *