Breaking News

ಫೇಕ್ ಅಟ್ರಾಸಿಟಿ ಕೇಸ್ ಕಿರುಕುಳಕ್ಕೆ ಮನನೊಂದ ವ್ಯಾಪಾರಿ ಆತ್ಮಹತ್ಯೆ – ಸಾವಿಗೂ ಮುನ್ನ ವಿಡಿಯೋ ಮಾಡಿ ಕಣ್ಣೀರು!

ಬೆಂಗಳೂರು ನಗರದ ಕಾಡುಗೋಡಿಯಲ್ಲಿ ಸುಳ್ಳು ಅಟ್ರಾಸಿಟಿ ಪ್ರಕರಣ ದಾಖಲಿಸಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಿ, 42 ವರ್ಷದ ವ್ಯಾಪಾರಿ ಪಾಪಣ್ಣ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಸಾವಿಗೂ ಮುನ್ನ ಅವರು ವಿಡಿಯೋ ಸಂದೇಶ ದಾಖಲಿಸಿ, ಕೆಲವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ವಿಡಿಯೋದಲ್ಲಿ ಪಾಪಣ್ಣ ಅವರು, 2021ರಲ್ಲಿಯೂ ತಮ್ಮ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿತ್ತು ಹಾಗೂ ಪ್ರಕರಣ ಹಿಂಪಡೆಯಲು ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರು ಎಂದು ಆರೋಪಿಸಿದ್ದಾರೆ. ಈಗ ಮತ್ತೊಮ್ಮೆ ಸುಳ್ಳು ಪ್ರಕರಣ ದಾಖಲಿಸಿ ಹಣಕ್ಕಾಗಿ ಒತ್ತಡ ಹೇರುತ್ತಿರುವುದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೇನೆ ಎಂದು ತಿಳಿಸಿದ್ದಾರೆ. ಮೃತರ ತಂಗಿ ಭಾಗ್ಯಶ್ರೀ ನೀಡಿದ ದೂರಿನ ಆಧಾರದಲ್ಲಿ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಪಣ್ಣ ಅವರ ವಿಡಿಯೋ ಹೇಳಿಕೆಯನ್ನು ಆಧಾರವಾಗಿ ಪಡೆದು ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಗಳ ಸತ್ಯಾಸತ್ಯತೆ ತನಿಖೆಯ ನಂತರವೇ ಸ್ಪಷ್ಟವಾಗಲಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *