Breaking News

ಹಾಲಿನ ಟ್ಯಾಂಕರ್ ಡಿಕ್ಕಿಗೆ ಜೋಳ ಹೊತ್ತ ಲಾರಿ ಭಸ್ಮ; ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಎರಡು ವಾಹನಗಳು

ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಮತ್ತು ಜೋಳದ ಮೂಟೆ ಸಾಗಿಸುತ್ತಿದ್ದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ವೇಗವಾಗಿ ಬಂದ ಟ್ಯಾಂಕರ್, ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಜ್ವಾಲೆಗಳು ವ್ಯಾಪಕವಾಗಿ ಹರಡಿವೆ. ಹೆದ್ದಾರಿ ಮಧ್ಯೆ ವಾಹನಗಳು ಹೊತ್ತಿ ಉರಿಯುತ್ತಿದ್ದ ದೃಶ್ಯ ಆತಂಕ ಸೃಷ್ಟಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಾಹನಗಳು ಹಾಗೂ ಸರಕುಗಳು ಬೆಂಕಿಗೆ ಆಹುತಿಯಾಗಿವೆ. ಅಪಘಾತದ ತಕ್ಷಣ ಚಾಲಕರು ವಾಹನಗಳಿಂದ ಹೊರಬಂದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *