ಕಲಬುರಗಿ: ಅಪ್ರಾಪ್ತ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿ ರಝಾಕ್ ಸಾಬಶೇಖ(20)ಗೆ ವಿಶೇಷ ಪೊಕ್ಸೊ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹55 ಸಾವಿರ ದಂಡ ವಿಧಿಸಿದೆ. 16 ವರ್ಷದ ಬಾಲಕಿಯನ್ನು ರಾಮನಗರದ ರೇಷ್ಮೆ ಕಾರ್ಖಾನೆಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದ ಆರೋಪದಡಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಬಳಿಕ ಆರೋಪಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ₹5 ಲಕ್ಷ ಪರಿಹಾರಧನ ನೀಡುವಂತೆ ಆದೇಶಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

