Breaking News

ಭೂ ತೆರಿಗೆ ಪಾವತಿಗೆ ಬಂದ ವ್ಯಕ್ತಿಯಿಂದ 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ನೌಕರನ ಬಂಧನ

ಉಪ್ಪಳ: ಭೂ ತೆರಿಗೆಯನ್ನು ಸಮಿತಿಯ ಹೆಸರಿಗೆ ಬದಲಾಯಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ₹5 ಸಾವಿರ ಲಂಚ ಪಡೆಯುತ್ತಿದ್ದ ಉಪ್ಪಳ ಗ್ರೂಪ್ ವಿಲೇಜ್ ಆಫೀಸ್‌ನ ನೌಕರ ಕೆ. ಶಿವಪ್ರಸಾದ್ (42) ಅವರನ್ನು ಕಾಸರಗೋಡು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಅರ್ಜಿದಾರರಿಂದ ಹಣದ ಬೇಡಿಕೆ ಇಟ್ಟಿದ್ದ ಶಿವಪ್ರಸಾದ್, ದಾಖಲೆಗಳ ಕೆಲಸವನ್ನು ಶೀಘ್ರವಾಗಿ ಮಾಡಿಕೊಡುವುದಾಗಿ ಹೇಳಿ ಲಂಚ ಕೇಳಿದ್ದ ಎನ್ನಲಾಗಿದೆ. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ವಿಜಿಲೆನ್ಸ್ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು. ಉಪ್ಪಳ ಗ್ರಾಮ ಕಚೇರಿಯಲ್ಲಿ ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಿವಪ್ರಸಾದ್ ಅವರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *