Breaking News

ಯುವತಿ ಮುಂದೆ ಹೊಟ್ಟೆಗೆ ಚಾಕು ಚುಚ್ಚಿಕೊಂಡ ಯುವಕ

ಆನೇಕಲ್ ತಾಲೂಕಿನ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ಪ್ರೇಯಸಿ ಎದುರೇ ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗಾಯಗೊಂಡ ಯುವಕನನ್ನು ಚಿದಂಬರ ಮಲ್ಲಪ್ಪ ಮರಮ್ಮಣ್ಣನವರ ಎಂದು ಗುರುತಿಸಲಾಗಿದೆ. ಪ್ರೇಯಸಿಯೊಂದಿಗೆ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆ ಆಕೆಯನ್ನು ಭೇಟಿಯಾಗಲು ಪಿಜಿ ಬಳಿ ತೆರಳಿದ್ದ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಭಾವೋದ್ವೇಗಕ್ಕೆ ಒಳಗಾದ ಯುವಕ ತನ್ನ ಹೊಟ್ಟೆಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದಾನೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *