Breaking News

ದಾವಣಗೆರೆಯಲ್ಲಿ 40 ನಕಲಿ ವೈದ್ಯರು ಪತ್ತೆ!

ದಾವಣಗೆರೆ ಜಿಲ್ಲೆಯಲ್ಲಿ ನಕಲಿ ವೈದ್ಯರ ವ್ಯವಹಾರಕ್ಕೆ ಕಡಿವಾಣ ಹಾಕಲು ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿಯು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಸೂಚಿಸಿದ್ದಾರೆ. ಜಿಲ್ಲಾ ಕ್ರಿಯಾ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ನಿಯಮ ಉಲ್ಲಂಘಿಸುವ ನಕಲಿ ವೈದ್ಯರಿಗೆ ₹25 ಸಾವಿರದಿಂದ ₹1 ಲಕ್ಷದವರೆಗೆ ದಂಡ ಹಾಗೂ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಜಿಲ್ಲೆಯಲ್ಲಿ 40 ನಕಲಿ ವೈದ್ಯರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ತಾಲೂಕುಗಳ ವೈದ್ಯಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *