Breaking News

ಸ್ನ್ಯಾಪ್‌ಚಾಟ್ ಪರಿಚಯ ಬೆಳೆಸಿ ವಿವಾಹಿತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಸ್ನ್ಯಾಪ್‌ಚಾಟ್ ಮೂಲಕ ಪರಿಚಯ ಬೆಳೆಸಿಕೊಂಡಿದ್ದ ವಿವಾಹಿತೆಯನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಮೃತಹಳ್ಳಿ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಬಂಧಿತನನ್ನು ಯಶಸ್ ಎಂದು ಗುರುತಿಸಲಾಗಿದ್ದು, ಕೌಟುಂಬಿಕ ಕಲಹದಿಂದ ಪತಿಯಿಂದ ದೂರವಿದ್ದ ಮಹಿಳೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಆತ್ಮೀಯತೆ ಬೆಳೆಸಿಕೊಂಡಿದ್ದ ಎನ್ನಲಾಗಿದೆ. ಮಹಿಳೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *