Breaking News

ಬೀದರ್ ತಾಲ್ಲೂಕಿನಲ್ಲಿ ಬಾಲ್ಯ ವಿವಾಹ; ವರ ಸೇರಿ 13 ಮಂದಿ ವಿರುದ್ಧ ಪ್ರಕರಣ ದಾಖಲು

ಬೀದರ್ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ವರ ಸೇರಿ 13 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ವರ, ವರನ ಪಾಲಕರು, ಬಾಲಕಿ ಪಾಲಕರು, ಕಲ್ಯಾಣ ಮಂಟಪ ಮಾಲೀಕ, ಟೆಂಟ್ ಹೌಸ್ ಮಾಲೀಕ, ಛಾಯಾಗ್ರಾಹಕ ಹಾಗೂ ಇತರರ ವಿರುದ್ಧ ಜನವಾಡ ಠಾಣೆ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲ್ಲೂಕಿನ ಗ್ರಾಮವೊಂದರ ಮಂದಿರದಲ್ಲಿ ಗುರುವಾರ 16 ವರ್ಷದ ಬಾಲಕಿಯ ವಿವಾಹ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಸ್ಥಳಕ್ಕೆ ಭೇಟಿ ನೀಡಿದಾಗ ಬಾಲ್ಯ ವಿವಾಹ ನಡೆದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಬಾಲ್ಯ ವಿವಾಹ ಮಾಡಿಸಿದವರ ವಿರುದ್ಧ ದೂರು ದಾಖಲಿಸಲಾಗಿದೆ’ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಾರದಾ ಕಲ್ಮಲಕರ್ ತಿಳಿಸಿದ್ದಾರೆ. ‘ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡಿದ ಆರೋಪದ ಮೇಲೆ ಕಲ್ಯಾಣ ಮಂಟಪ, ಟೆಂಟ್ ಹೌಸ್ ಮಾಲೀಕ ಹಾಗೂ ಛಾಯಾಗ್ರಾಹಕರ ವಿರುದ್ಧವೂ ಪ್ರಕರಣ ದಾಖಲಾದ ಜಿಲ್ಲೆಯ ಮೊದಲ ಪ್ರಕರಣ ಇದಾಗಿದೆ’ ಎಂದು ಹೇಳಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಅಕ್ಕ ಪಡೆ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *